ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ  ತಾಲೂಕು ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಿನಾಂಕ ಡಿಸೆಂಬರ್ 17, 18 ಮತ್ತು 19 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.

ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ತಾಲೂಕು  ಜಾಲ್ಸೂರು ಗ್ರಾಮ ಪಂಚಾಯತ್ ಸಭಾ ಭವನ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ, 18 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ಪ್ರವಾಸಿ ಮಂದಿರ, 19 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಛೇರಿ ಹಾಲ್, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000  ಸಂಪರ್ಕಿಸಲು  ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಲು ರಾಜ್ಯ ಸರಕಾರದಿಂದ ಕಟ್ಟುನಿಟ್ಟಿನ ಕ್ರಮ ಜಾರಿ

error: Content is protected !!
Scroll to Top