ಕುಕ್ಕೇಯನ್ನು ತಿರುಪತಿಗೆ ಹೋಲಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದ್ದೇಕೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತಿರುಪತಿಯಲ್ಲಿ ನೀಡುವ ಸಂಬಳವನ್ನು ನೀಡಲಾಗುವುದಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ.

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕೆಲಸ ಮಾಡುವ ‘ಡಿ’ ಗ್ರೂಪ್​​ ನೌಕರರಿಗೆ ನೀಡುತ್ತಿರುವ ವೇತನವನ್ನು ತಮಗೂ ನೀಡುವಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ 20 ಮಂದಿ ಸಿಬ್ಬಂದಿಗಳು ಹೈಕೋರ್ಟ್​ನಲ್ಲಿ ದಾವೆ ಸಲ್ಲಿಸಿದ್ದರು. ಈ ದಾವೆಯನ್ನು ತಿರಸ್ಕರಿಸಿದ ಹೈಕೋರ್ಟ್, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳೇ ಬೇರೆಯಾಗಿರುವುದರಿಂದ ತಿರುಪತಿಯ ವೇತನವನ್ನು ಸಾಧ್ಯವಿಲ್ಲ ಎಂದು ಅರ್ಜಿಯನ್ನು ತಿರಸ್ಕರಿಸಿದೆ.

Also Read  ಕಡಬದ ಕೃಪಾ ಟ್ರೇಡರ್ಸ್ ಕಳಾರದ ಅನೋಲ್ಡಾ ಕಾಂಪ್ಲೆಕ್ಸ್ ಗೆ ಸ್ಥಳಾಂತರ

error: Content is protected !!
Scroll to Top