(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15. ರಾಜ್ಯದಲ್ಲೂ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ
ಸೂಚನೆ ನೀಡಿದ್ದಾರೆ.
ಶನಿವಾರದಂದು ಸಿಎಂಗೆ ಕರೆ ಮಾಡಿ ಉಪ ಚುನಾವಣೆಯಲ್ಲಿ 12 ಸ್ಥಾನ ಗೆದ್ದು ಕರ್ನಾಟಕದಲ್ಲಿ ಸದೃಢ ಬಿಜೆಪಿ ಸರಕಾರವನ್ನು ಹೊಂದಿರುವುದಕ್ಕೆ ಅಭಿನಂದನೆ ಹೇಳಿದ ಪ್ರಧಾನಿ ಮೋದಿ, ಪೌರತ್ವ ಕಾಯ್ದೆ ಅನುಷ್ಠಾನದತ್ತ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ. ಪೌರತ್ವ ಕಾಯ್ದೆಯು ಬಿಜೆಪಿ ಪಕ್ಷದ ಮಹತ್ವದ ಯೋಜನೆ ಇದಾಗಿದ್ದು, ಸಚಿವರು ಹಾಗೂ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿ ಎಂದು ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಅಭಿವೃದ್ಧಿ ಕಾರ್ಯಗಳಿಗಾಗಿ ಕೇಂದ್ರದಿಂದ ಅಗತ್ಯ ನೆರವು ನೀಡುವುದಾಗಿಯೂ ಈ ಸಂದರ್ಭದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.