ಬೆಳ್ತಂಗಡಿ: ಪಿಕಪ್ – ಬೈಕ್ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.15. ಪಿಕಪ್ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ.

ಮೃತ ಸವಾರರನ್ನು ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಶೇಷಪ್ಪ ಮೂಲ್ಯ(44) ಹಾಗೂ ಅವರ ಸಂಬಂಧಿ ನಾವೂರು ಜನತಾ ಕಾಲನಿ ನಿವಾಸಿ ಕಲ್ಯಾಣಿ(55) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಬೆಳ್ತಂಗಡಿಯಿಂದ ನಾವೂರು ಕಡೆಗೆ ತೆರಳುತ್ತಿದ್ದ ವೇಳೆ ಮಂಜೊಟ್ಟಿ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಪಿಕಪ್ ವಾಹನ ನಿಯಂತ್ರಣ ಕಳೆದುಕೊಂಡು ಇವರು ಪ್ರಯಾಣಿಸುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಸೇಸಪ್ಪ ಮೂಲ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಲ್ಯಾಣಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿಗೆ ಕೊಂಡೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top