ಮಂಗಳೂರು: ಜಾಮಿಯಾ ಮಿಲ್ಲಿಯಾ ವಿವಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡಿಸಿ ಸಿಎಫ್‌ಐಯಿಂದ ರಸ್ತೆ ತಡೆ

ಮಂಗಳೂರು, ಡಿ.16: ಪೌರತ್ವ ಕಾಯ್ದೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಎಸಗಿದ ದೌರ್ಜನ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಸೋಮವಾರ ಸಂಜೆ ನಗರದ ಬಲ್ಮಠದಲ್ಲಿರುವ ಕಲೆಕ್ಟರ್ ಗೇಟ್ ಬಳಿ ರಸ್ತೆ ತಡೆ ನಡೆಸಿದರು.

 

ಈ ಸಂದರ್ಭ ಪೊಲೀಸರು ಸುಮಾರು 50ಕ್ಕೂ ಅಧಿಕ ಸಿಎಫ್‌ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ ವಶಕ್ಕೆ ತೆಗೆದುಕೊಂಡರು. ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳ ಮೇಲೆ ನಡೆಸಿದ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಸಲು ಸಿಎಫ್‌ಐ ಕಾರ್ಯಕರ್ತರಿಗೆ ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ರಸ್ತೆ ತಡೆ ನಡೆಸಲು ನಿರ್ಧರಿಸಿದರು. ಅದರಂತೆ ಖಾಸಗಿ ಬಸ್ಸೊಂದರಲ್ಲಿ ಆಗಮಿಸಿದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Also Read  ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ  ➤ ರಾಹುಲ್ ಗಾಂಧಿ ಮಹತ್ವದ ಘೋಷಣೆ

 

error: Content is protected !!
Scroll to Top