(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 
ಬಂಧಿತ ಆರೋಪಿಗಳನ್ನು ಹತ್ಯೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಸಜಿಪ ಮುನ್ನೂರು ಆಲಾಡಿ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಶರೀಫ್ (22) ಹಾಗೂ ಕೃತ್ಯಕ್ಕೆ ಸಹಕರಿಸಿದ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ಜಬ್ಬಾರ್(29) ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 10ಕ್ಕೆ ಏರಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬಾತ ವಿದೇಶಕ್ಕೆ ತೆರಳಿದ್ದಾನೆ ಎಂಬ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.