ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು, ಡಿ.17: ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೊಕ್ಸೊ ಅಡಿ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

 

ಶಿಕ್ಷೆಗೊಳಾಗಾದವರನ್ನು ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರ ನಿವಾಸಿ ಕಿಶೋರ್‌ ಭಯ್ಯಾ (36) ಎಂದು ಗುರುತಿಸಲಾಗಿದೆ. ಈತ ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ. 2016ರಲ್ಲಿ ಕಿಶೋರ್‌ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್‌ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ ಮಾಡಿದ್ದು ಕೊಲೆ ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಬಾಲಕಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ. ಆ ಬಳಿಕ ಆರೋಪಿ ತಂದೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದು ಆ ಪರಿಣಾಮವಾಗಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಬಾಲಕಿಯ ತಾಯಿ ನಗರದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Also Read  ಶಿಥಿಲಗೊಂಡ ಮನೆಯಲ್ಲಿ ಮತದಾನ ಮಾಡಿದ 104 ವರ್ಷದ ವೃದ್ಧೆ..!​ ➤ ಚರ್ಚೆಗೆ ಗ್ರಾಸವಾಯಿತು ಜಿಲ್ಲಾಧಿಕಾಯ ಫೇಸ್‌ಬುಕ್ ಪೋಸ್ಟ್.!​

ಠಾಣಾ ಇನ್‌ಸ್ಪೆಕ್ಟರ್‌ ಕಲಾವತಿ ಈ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಹಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 12 ಸಾಕ್ಷಿದಾರರನ್ನು ಹಾಗೂ 24 ದಾಖಲೆಗಳನ್ನು ಪರಿಗಣಿಸಲಾಗಿತ್ತು. ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಆರ್‌. ಪಲ್ಲವಿ ಅವರು ಆರೋಪಿ ತಪ್ಪಿತಸ್ಥ ಎಂದು ಸಾಬೀತು ಪಡಿಸಿದ್ದು ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದಾರೆ.

Also Read  ಕಲ್ಲುಗುಡ್ಡೆ: ಇಂದು ಬೆಳಿಗ್ಗೆ ಪುನಃ ತೆರೆದ ಮದ್ಯದಂಗಡಿ ► ಗ್ರಾಮಸ್ಥರಿಂದ ತೀವ್ರಗೊಂಡ ಪ್ರತಿಭಟನೆ

error: Content is protected !!
Scroll to Top