ಕಾಸರಗೋಡು, ಡಿ17: ದುಷ್ಕರ್ಮಿಗಳ ತಂಡವೊಂದು ಯುವಕನ ಕೊಲೆಗೆತ್ನಿಸಿದ ಘಟನೆ ನಗರ ಹೊರವಲಯದ ಅಡ್ಕತ್ತಬೈಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗಂಭೀರ ಗಾಯಗೊಂಡ ಅಶೋಕ್ (28) ರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ ಕೃತ್ಯ ನಡೆಸಲಾಗಿದೆ. ಬೊಬ್ಬೆ ಕೇಳಿ ಪರಿಸರವಾಸಿಗಳು ಧಾವಿಸಿ ಬಂದಾಗ ಅಶೋಕ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕಾಸರಗೋಡು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದು, ತನಿಖೆ ಮುಂದುವರಿಸಿದ್ದಾರೆ.