ವಿಶೇಷ ಆರೋಗ್ಯ ತಪಾಸಣಾ ಶಿಬಿರ



(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.







ಡಿಸೆಂಬರ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಡಿಸೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಡಿಸೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top