ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಎಲ್ಲಾ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಇತರೆ ದಾಖಲಾತಿಗಳು ಸೇರಿದಂತೆ ನ್ಯೂನ್ಯತೆಗಳನ್ನು ಸರಿಪಡಿಸಲು ಅವಕಾಶವಿರುತ್ತದೆ. ಇದಲ್ಲದೆ ಅರ್ಹ ರೈತರು ಹೊಸದಾಗಿ ನೊಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ ಹೋಬಳಿ ರೈತ ಸಂಪರ್ಕ ಕೇಂದ್ರ/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು  ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top