ಸಚಿವ ಎಸ್. ಸುರೇಶ್ ಕುಮಾರ್ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17    ಪ್ರಾಥಮಿಕ  ಮತ್ತು ಪ್ರೌಢ ಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್ ಇವರ ದ.ಕ ಜಿಲ್ಲಾಪ್ರವಾಸ ಮಾಡಲಿದ್ದಾರೆ.


ಇಂದು ಬೆಳಿಗ್ಗೆ 8.45 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಬೆಳಿಗ್ಗೆ 10 ಗಂಟೆಗೆ ಬಂಟ್ವಾಳದ ವಿದ್ಯಾಗಿರಿಯಲ್ಲಿ ಎಸ್‍ವಿಎಸ್ ಆಂಗ್ಲ ಮಾಧ್ಯಮ ಶಾಲೆಯ  ಅಟಲ್ ಟಿಂಕರಿಂಗ್ ಲ್ಯಾಬ್ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪ್ರಾಂಶುಪಾಲರ ಸಂಘದ ವತಿಯಿಂದ ಫ್ಲಡ್ ರಿಲೀಫ್ ಫಂಡ್ ಡೊನೇಷನ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.40 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ  ತೆರಳಲಿದ್ದಾರೆ.

Scroll to Top