(ನ್ಯೂಸ್ ಕಡಬ) newskadaba.com ಸುಳ್ಯ, ಡಿ 17: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಕೊಲೆಗೈದ ಘಟನೆ ಸುಳ್ಯದ ಜೋಡುಪಾಲದ ಅಬ್ಬಿಕೊಲ್ಲಿ ಎಂಬಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಅಬ್ಬಿಕೊಲ್ಲಿ ನಿವಾಸಿ ಕುಡಿಯರ ಹೊನ್ನಮ್ಮ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 6 ಗಂಟೆ ವೇಳೆ ಆಸ್ತಿ ಮತ್ತು ಮನೆಗೆ ತೆರಳುವ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಹೊನ್ನಮ್ಮ ಮತ್ತು ಕುಡಿಯರ ಆನಂದ ಇವರ ನಡುವೆ ವಾಗ್ವಾದ ನಡೆದಿದ್ದು, ಈ ಸಂಧರ್ಭ ಆಕ್ರೋಶಗೊಂಡಿದ್ದ ಆನಂದ ತನ್ನ ಬಳಿಯಿದ್ದ ಚೂರಿಯಿಂದ ಹೊನ್ನಮ್ಮಳನ್ನು ಇರಿದು ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.