(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಕೇಂದ್ರ ಸರಕಾರದ ಪೌರತ್ವ ನೀತಿಯ ವಿರುದ್ಧ ವಿವಿಧ ಸಂಘಟನೆಗಳು ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆ ನಡೆಸುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆಯನ್ನು ಮುಂದಿಟ್ಟುಕೊಂಡು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದಿನಿಂದ ಡಿ.20 ರ ರಾತ್ರಿ12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಆದೇಶಿಸಿದ್ದಾರೆ.
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕ ರಾಷ್ಟ್ರೀಯ ನೋಂದಣಿಯನ್ನು ಜಾರಿ ಮಾಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗಳು ನಡೆಯುತ್ತಿದ್ದು, ಕೆಲವೆಡೆ ಹಿಂಸಾಚಾರಕ್ಕೆ ತಿರುಗಿದೆ. ಅಲ್ಲದೆ ಡಿಸೆಂಬರ್ 19 ಮತ್ತು 20 ರಂದು ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಅಖಿಲ ಭಾರತ ಬಂದ್ ಗೆ ಕರೆಕೊಟ್ಟಿರುವ ಬಗ್ಗೆ ಮಾಹಿತಿ ಇರುವುದರಿಂದ ಅತಿಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಮೆರವಣಿಗೆ, ಪ್ರತಿಭಟನೆ ನಡೆದರೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆಯನ್ನು ಮನಗಂಡು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144 ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಆದೇಶಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.