ಅಶ್ಲೀಲ ವೆಬ್‌ಸೈಟ್ ಗಳನ್ನು ನಿಷೇಧಿಸಿ.! ➤ ಬೆಳ್ತಂಗಡಿ ಬಿಷಪ್ ರಿಂದ ಪ್ರಧಾನಿ ಮೋದಿಗೆ ಪತ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.19. ಯುವ ಜನತೆಯು ಹೆಚ್ಚಾಗಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವುದರಿಂದ ದೇಶದಲ್ಲಿ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಅಶ್ಲೀಲ ವೆಬ್‍ಸೈಟುಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.

ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆಯುತ್ತಿರುವಂತಹ ಲೈಂಗಿಕ ದೌರ್ಜನ್ಯಗಳು, ಮತ್ತು ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸ ನಡೆಯುತ್ತಿದೆ. ಯುವಜನತೆಯ ಮನಸ್ಥಿತಿ ಹಾಳಾಗಲು ಅಶ್ಲೀಲ ವೀಡಿಯೋ ವೀಕ್ಷಣೆಯು ಪ್ರಮುಖ ಪಾತ್ರ ವಹಿಸುತ್ತಿವೆ. ಆದುದರಿಂದ ಅಶ್ಲೀಲ ಜಾಲತಾಣಗಳನ್ನು ಮತ್ತು ಆಶ್ಲೀಲ ಮಾಹಿತಿಗಳನ್ನು ಹರಡುತ್ತಿರುವ ವೆಬ್‍ಸೈಟುಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕಾಗಿ ಪತ್ರದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಝಿಯವರು ಕೋರಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೆವರೆಂಡ್ ಫಾದರ್ ಡಾ.ತೋಮಸ್ ಕಳ್ಳಿಕಾಟ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ

Nk Kukke

error: Content is protected !!
Scroll to Top