ಬಂಟ್ವಾಳ, ಡಿ 18: ನಿಯಂತ್ರಣ ಕಳೆದುಕೊಂಡು ಬೈಕ್ ರಸ್ತೆಗೆ ಉರುಳಿದ ಪರಿಣಾಮ ಕನ್ಯಾನ ಗ್ರಾಮ ಪಂಚಾಯತ್ ಸದಸ್ಯ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲದ ಕನ್ಯಾನ ಗ್ರಾಮದ ಕೆಳಗಿನಪೇಟೆಯಲ್ಲಿ ನಡೆದಿದೆ.
ಮೃತರನ್ನು ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ, ಕನ್ಯಾನ ಗ್ರಾಮ ಪಂಚಾಯಿತಿ ಸದಸ್ಯ ವಾಲ್ಟರ್ ಡಿಸೋಜ(45) ಹಾಗೂ ಕನ್ಯಾನ ಗ್ರಾಮದ ಪಂಜಾಜೆ ನಿವಾಸಿ ವಿಲ್ಸನ್ ಡಿಸೋಜ(52) ಎಂದು ಗುರುತಿಸಲಾಗಿದೆ. ಇವರು ಕನ್ಯಾನ ಸರ್ಕಾರಿ ಆಸ್ಪತ್ರೆಯಿಂದ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದು ತಲೆಗೆ ತೀವ್ರ ಸ್ವರೂಪದ ಗಾಯಗಳಾದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.