ದ.ಕ., ಉಡುಪಿ ಜಿಲ್ಲೆಯಲ್ಲಿ ಡಿ.21ರವರೆಗೆ ನಿಷೇಧಾಜ್ಞೆ

ಮಂಗಳೂರು,/ ಉಡುಪಿ, ಡಿ.19: ಪೌರತ್ವ ಕಾಯ್ದೆ ವಿರುದ್ಧ ಹಲವು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ ನೀಡಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಡಿ.21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

 

ಡಿ.19 ರಿಂದ ಡಿ.20 ರ ರಾತ್ರಿ12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ. ಅಲ್ಲದೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಹಲವು ಸಂಘಟನೆಗಳು ಡಿ.19 ಹಾಗೂ 20.ರಂದು ಭಾರತ್‌ ಬಂದ್‌ಗೆ ಕರೆ ಕೊಟ್ಟಿರುವ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯು ಅತಿಸೂಕ್ಷ್ಮ ಪ್ರದೇಶವಾಗಿರುವುದರಿಂದ ಅಂತಹ ಮೆರವಣಿಗೆ ಪ್ರತಿಭಟನೆ ಕಾರ್ಯಕ್ರಮ ನಡೆಸಿದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂಬ ಹಿನ್ನಲೆಯಲ್ಲಿ ಪೊಲೀಸ್ ಅಯುಕ್ತ ಡಾ.ಪಿ.ಎಸ್ ಹರ್ಷ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

Also Read  ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ

 

 

error: Content is protected !!
Scroll to Top