ಮುಖ್ಯಮಂತ್ರಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.19    ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿ.21ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.


ಡಿಸೆಂಬರ್ 21 ರಂದು ಮಧ್ಯಾಹ್ನ 2.40  ಮಂಗಳೂರು ವಿಮಾನದ ನಿಲ್ದಾಣಕ್ಕೆ ಆಗಮನ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ  5 ಗಂಟೆಗೆ ಮೂಡಬಿದಿರೆಯ ಕಡಲಕೆರೆ ನಿಸರ್ಗಧಾಮದಲ್ಲಿ 17 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಉತ್ಸವ ಹಾಗೂ ವೀರರಾಣಿ ಅಬ್ಬಕ್ಕ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8.40 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

Also Read  ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

error: Content is protected !!
Scroll to Top