ಪೌರತ್ವ ನಿಯಮದಿಂದ ಭಾರತದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ➤ ದಿಲ್ಲಿ ಜಾಮಾ ಮಸೀದಿಯ ಶಾಹಿ ಇಮಾಮ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.19. ನೂತನ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ದಿಲ್ಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.


ಕೇಂದ್ರ ಸರಕಾರವು ಜಾರಿಗೊಳಿಸಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್.ಆರ್.ಸಿಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಶಾಹಿ ಇಮಾಮ್, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ನಮ್ಮ ಹಕ್ಕು. ಆದರೆ ಹಿಂಸಾತ್ಮಕ ರೀತಿಯಲ್ಲಿ ಪ್ರತಿಭಟಿಸಿ ಸಾರ್ವಜನಿಕ ಆಸ್ತಿ – ಪಾಸ್ತಿಗೆ ಹಾನಿ ಎಸಗುವುದು ಸರಿಯಲ್ಲ ಎಂದು ಅವರು ಹೇಳಿರುವ ವೀಡಿಯೋ ಇದೀಗ ವೈರಲ್ ಆಗುತ್ತಿದೆ.

Also Read  ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ

Nk Kukke

error: Content is protected !!
Scroll to Top