ಪೌರತ್ವ ಕಾನೂನು ವಿರುದ್ಧದ ಪ್ರತಿಭಟನೆಗೆ ನಲುಗಿದ ಕರಾವಳಿ ➤ ಮಂಗಳೂರಿನಲ್ಲಿ ಲಾಠಿ ಚಾರ್ಜ್, ಅಶ್ರುವಾಯು ಸಿಡಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲೂ ಪ್ರತಿಭಟನೆಯ ಕಾವು ತೀವ್ರಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ.

 

ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಲಾಗಿದೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

Also Read  ಮಂಗಳೂರು: ಸ್ನೇಹಿತನ ಕೊಲೆಯ ಮೂಲಕ ಅಂತ್ಯವಾದ ದಸರಾ ಪಾರ್ಟಿ..!

 

Nk Kukke

error: Content is protected !!
Scroll to Top