ಮಂಗಳೂರು: ಪೊಲೀಸ್ ಗುಂಡಿಗೆ ಇಬ್ಬರು ಬಲಿ..? ➤ ಕರ್ಫ್ಯೂ ನಂತರ ಪರಿಸ್ಥಿತಿ ಹತೋಟಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಬೀದಿಗಿಳಿದ ಜನರನ್ನು ಚದುರಿಸಲು ಪೊಲೀಸರು ಹಾರಿಸಿದ ಗಾಳಿಯಲ್ಲಿ ಗುಂಡು ತಗುಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಪ್ರತಿಭಟನೆಯ ಕಿಚ್ಚು ಜೋರಾಗುತ್ತಿದ್ದಂತೆ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಆದರೂ ಪರಿಸ್ಥಿತಿ ಕೈಮೀರಿ ಹೋಗುತ್ತಿರುವುದನ್ನು ಅರಿತ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಓರ್ವನ ಕಣ್ಣಿಗೆ ಹಾಗೂ ಮತ್ತೋರ್ವನ ಬೆನ್ನಿಗೆ ಗುಂಡು ತಗುಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆಯು ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ಸುಳ್ಯದಲ್ಲಿ ಗಾಂಜಾ ಸಾಗಾಟ ➤ ಆರೋಪಿಗಳು ಖಾಕಿ ಬಲೆಗೆ

error: Content is protected !!
Scroll to Top