‘ಪೌರತ್ವ’ ಕೆಂಡದಲ್ಲಿ ಹೊತ್ತಿ ಉರಿದ ಮಂಗಳೂರು ➤ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಗರದಲ್ಲಿ ಗುರುವಾರದಂದು ನಡೆದ ಹಿಂಸಾಚಾರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Nk Kukke

ಕೇಂದ್ರ ಸರಕಾರವು ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ನಡುವೆ ಗುರುವಾರದಂದು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದನ್ನು ಉಲ್ಲಂಘಿಸಿ ಕೆಲವರು ಪ್ರತಿಭಟನೆಗೆ ಮುಂದಾಗಿದ್ದು, ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Also Read  KMSPICO Activator Download Official

error: Content is protected !!
Scroll to Top