ನಾಳೆ (ಡಿ.20) ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ



(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಪೌರತ್ವ ಮಸೂದೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪೊಲೀಸ್ ಗುಂಡಿಗೆ ಇಬ್ಬರು ಬಲಿಯಾಗಿದ್ದು, ಹಲವು ಪ್ರತಿಭಟನಾಕಾರರು ಹಾಗೂ ಪೊಲೀಸರು ಗಾಯಗೊಂಡ ಕಾರಣ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಳೆ (ಡಿಸೆಂಬರ್ 20) ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.







ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲಾದ್ಯಂತ ಎಲ್ಲಾ ಶಾಲೆ ಕಾಲೇಜುಗಳಿಗೆ, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.






error: Content is protected !!
Scroll to Top