ಪೇಜಾವರ ಶ್ರೀ ಆರೋಗ್ಯ ಸ್ಥಿತಿಯಲ್ಲಿ ಗಂಭೀರ ➤ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.20. ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Nk Kukke

ಶುಕ್ರವಾರ ಬೆಳಿಗ್ಗಿನ ಜಾವ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳ ಆರೋಗ್ಯ ವೃದ್ಧಿಗೆ ಪ್ರಾರ್ಥನೆ ಸಲ್ಲಿಸುವಂತೆ ಮಠವು ಮನವಿ ಮಾಡಿಕೊಂಡಿದೆ.

Scroll to Top