ನೆಲ್ಯಾಡಿ: ಕಾರಿನ ಮೇಲೆ ಉರುಳಿ ಬಿದ್ದ ಲಾರಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.20. ಲಾರಿಯೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಕಬ್ಬಿಣದ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಉದನೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Scroll to Top