(ನ್ಯೂಸ್ ಕಡಬ) newskadaba.com ಬೆಂಗಳೂರು, 10 ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಬಹುಬೇಡಿಕೆಯ ಬಹುಭಾಷಾ ನಟಿ ಪ್ರಿಯಾಮಣಿ ತನ್ನ ಬಾಲ್ಯದ ಗೆಳೆಯ ಮುಂಬೈ ಮೂಲದ ಉದ್ಯಮಿ ಮುಸ್ತಫಾ ರಾಜ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ.

ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯ ಮೇರೆಗೆ ಪ್ರಿಯಾಮಣಿ ವರ್ಷದ ಹಿಂದೆ ಮುಸ್ತಫಾ ರಾಜ್ ಜೊತೆ ಉಂಗುರ ಬದಲಾಯಿಸಿಕೊಳ್ಳುವ ಮೂಲಕ ಮದುವೆಯ ಮುನ್ಸೂಚನೆ ನೀಡಿದ್ದರು. ಅದರಂತೆ ಬೆಂಗಳೂರಿನಲ್ಲಿ ನೋಂದಣಿ ಮಾಡಿಸಿಕೊಳ್ಳುವುದರೊಂದಿಗೆ ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ ಇಂದು ಸರಳ ವಿವಾಹ ಆಗುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ. ಗುರುವಾರ ಸಂಜೆ ಬೆಂಗಳೂರಿನ ಜೆ ಪಿ ನಗರದ ಬಳಿ ಇರುವ `ಇಲಾನ್ ಕನ್ವೆಂಷನ್ ಹಾಲ್ ‘ನಲ್ಲಿ ಆರತಕ್ಷತೆ ಮಾಡಿಕೊಳ್ಳಲಿದ್ದಾರೆ. ಸಂಜೆ 7 ಗಂಟೆಯಿಂದ 10 ಗಂಟೆಯವರೆಗೆ ನಡೆಯುವ ಆರತಕ್ಷತೆ ಸಮಾರಂಭಕ್ಕೆ ತನ್ನ ಆಪ್ತ ವಲಯದ ಕೆಲವೇ ಕೆಲವು ಸಿನಿಮಾ ಗಣ್ಯರನ್ನ ಹಾಗೂ ಸ್ನೇಹಿತರನ್ನು ಆಹ್ವಾನಿಸಲಾಗಿದೆ.












