ವಿಟ್ಲ: ಟಿಪ್ಪರ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರನಿಗೆ ಗಾಯ



(ನ್ಯೂಸ್ ಕಡಬ) newskadaba.com ವಿಟ್ಲ, ಡಿ.22. ಟಿಪ್ಪರ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕರೋಪಾಡಿ ಎಂಬಲ್ಲಿ ಭಾನುವಾರದಂದು ನಡೆದಿದೆ.







ಮೃತ ಸವಾರನನ್ನು ವಿಟ್ಲದ ಮುಗುಳಿ ನಿವಾಸಿ ಅನ್ವರ್ ಎಂದು ಗುರುತಿಸಲಾಗಿದೆ. ಅನ್ವರ್ ತನ್ನ ಸ್ಮೇಹಿತನೊಂದಿಗೆ ಬುಲ್ಲೆಟ್ ನಲ್ಲಿ ತೆರಳುತ್ತಿದ್ದ ವೇಳೆ ಕರ್ನಾಟಕದಿಂದ ಕೇರಳಕ್ಕೆ ಎಂ.ಸ್ಯಾಂಡ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ನಡುವೆ ಮುಗುಳಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top