ಜಾರ್ಖಂಡ್ ಚುನಾವಣಾ ಫಲಿತಾಂಶ: ಜಿದ್ದಾಜಿದ್ದಿನ ಕಾದಾಟದಲ್ಲಿ ಜೆಎಂಎಂ-ಕಾಂಗ್ರೆಸ್, ಬಿಜೆಪಿ

ರಾಂಚಿ, ಡಿ.23: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಇನ್ನೇನು ಕೆಲವೇ ಹೊತ್ತಿನಲ್ಲಿ ಹೊರಬೀಳುವ ಸಾಧ್ಯತೆ ಇದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಎದುರಾಗಿದೆ.

ಈಗ ಬಂದ ವರದಿಗಳ ಪ್ರಕಾರ ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಮೈತ್ರಿ ಕೂಟ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಉಳಿದಂತೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಎಜೆಎಸ್ ಯು ಪಕ್ಷ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜೆವಿಎಂ 3 ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

Also Read  ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು

error: Content is protected !!
Scroll to Top