ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ಸಿಎಂ

ಬೆಂಗಳೂರು, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ.

Nk Kukke

ಬೆಂಗಳೂರಿನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿ. ಎಸ್. ಯಡಿಯೂರಪ್ಪ, ಮಂಗಳೂರು ಗಲಭೆಯಲ್ಲಿ ನಡೆದ ಗೋಲಿಬಾರ್ ನ ಬಗ್ಗೆ ನಾವು ಸಿಐಡಿ ತನಿಖೆಗೆ ಒಪ್ಪಿಸುತ್ತಿದ್ದೇವೆ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆ ಉದ್ದೇಶಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ತಲುಪಿತ್ತು. ಬಂದರ್ ಪೊಲೀಸ್ ಠಾಣೆಯ ಎದುರು ಹಿಂಸಾಚಾರದಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು  ಅಮಾಯಕರು ಬಲಿಯಾಗಿದ್ದರು.

Also Read  ಲಾಯಿಲ: ಬೈಕ್ ಸ್ಕಿಡ್ ► ಸವಾರ ಮೃತ್ಯು

error: Content is protected !!
Scroll to Top