ಮಂಗಳೂರು ಗೋಲಿಬಾರ್ ಪ್ರಕರಣ: ಮ್ಯಾಜಿಸ್ಟ್ರೀಯಲ್  ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಡಿ. 24: ಪೌರತ್ವ ತಿದ್ದುಪತಿ ಕಾಯ್ದೆ  ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್  ತನಿಖೆಗೆ ವಹಿಸಿ ಆದೇಶಿಸಿದೆ.

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಮ್ಯಾಜಿಸ್ಟ್ರೀಯಲ್ ತನಿಖೆ ನಡೆಸುವಂತೆ ರಾಜ್ಯ ಸರಕಾರ ಆದೇಶಿಸಿದೆ.

Scroll to Top