ಮಂಗಳೂರು ಗೋಲಿಬಾರ್ ಪ್ರಕರಣ: ಕಮಿಷನರ್, ಇನ್ಸ್ ಸ್ಪೆಕ್ಟರ್ ಅಮಾನತಿಗೆ ದಿನೇಶ್ ಗುಂಡೂರಾವ್ ಆಗ್ರಹ

ಮಂಗಳೂರು, ಡಿ.24: ಪೌರತ್ವ ಕಾಯ್ದೆ ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗೋಲಿಬಾರ್‌ಗೆ ಇಬ್ಬರ ಸಾವಿಗೆ ಕಾರಣರಾದ ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಹಾಗೂ ಇನ್ ಸ್ಪೆಕ್ಟರ್ ಶಾಂತರಾಮ ಕುಂದರ್ ಅವರನ್ನು ಅಮಾನತುಗೊಳಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಿಐಡಿ ತನಿಖೆ ಸಾಲದು. ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದರು. ಅಲ್ಲದೆ ಕಮಿಷನರ್ ಮತ್ತು ಇನ್ಸ್ ಪೆಕ್ಟರ್ ಸಹಿತ ತಪ್ಪಿತಸ್ಥ ಅಧಿಕಾರಿಗಳು ಕರ್ತವ್ಯದಲ್ಲಿರುವಾಗ ತನಿಖೆ ನಡೆಸಲು ಸಾಧ್ಯವಿಲ್ಲ. ಅವರನ್ನು ಅಮಾನತುಗೊಳಿಸಿದ ಬಳಿಕ ತನಿಖೆ ನಡೆಸಿದರೆ ಅದರಲ್ಲಿ ಪಾರದರ್ಶಕತೆ ಕಾಣಬಹುದು ಎಂದು ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹರೀಶ್ ಕುಮಾರ್, ಐವನ್ ಡಿಸೋಜ, ಮೊಯ್ದಿನ್ ಬಾವಾ, ಜೆಆರ್ ಲೋಬೊ, ಅಭಯಚಂದ್ರ ಜೈನ್, ಇಬ್ರಾಹೀಂ‌ ಕೋಡಿಜಾಲ್ ಮತ್ತಿತರರು ಉಪಸ್ಥಿತರಿದ್ದರು.

Also Read  ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮಗುಚಿಬಿದ್ದ ಲಾರಿ ➤ ಸವಾರ ದುರ್ಮರಣ

error: Content is protected !!
Scroll to Top