ಕೇಂದ್ರ ಸರಕಾರಿ ಉದ್ಯೋಗ – ಉಚಿತ ಪರೀಕ್ಷಾ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.26   ಕೇಂದ್ರ ಸರಕಾರದ ವಿವಿಧ ಇಲಾಖೆಗಳ ಸಿಬ್ಬಂದಿ ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗವು ನಡೆಸುವ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ 6 ರಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಇಚ್ಛಿಸುವ  ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಬೇಕು. ದೂರವಾಣಿ ಸಂಖ್ಯೆ  0824-2457139 ಸಂಪರ್ಕಿಸಬಹುದು ಎಂದು  ಉದ್ಯೋಗಾಧಿಕಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅರಂತೋಡು: ಎಸ್ಕೆಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ

error: Content is protected !!
Scroll to Top