ಕಡಬ: ದ್ವಿಚಕ್ರ – ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

download

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಡಬದ ಹಳೇ ಸ್ಟೇಷನ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ನೂಜಿಬಾಳ್ತಿಲ ಗ್ರಾಮದ ಪಳೆಯಮಜಲು ನಿವಾಸಿ ಜೂಲಿ ತೋಮಸ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಪತಿ ಹಾಗೂ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಕಡಬ ಕಡೆಗೆ ಬರುತ್ತಿದ್ದ ವೇಳೆ ಹಳೇಸ್ಟೇಷನ್ ಸಮೀಪ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡು ವೆ ಈ ಅವಘಡ ಸಂಭವಿಸಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಗಾಯಾಳುವನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಸೌದಿಯಲ್ಲಿ ಬಂಧಿತ ಹರೀಶ್ ಹೆಸರಲ್ಲಿ ಮತ್ತೊಂದು ಫೇಸ್‌ಬುಕ್‌ ಖಾತೆ

 

error: Content is protected !!
Scroll to Top