| ಬೆಳ್ತಂಗಡಿ, ಡಿ.27: ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಸಂತೆಕಟ್ಟೆ ಆನ್ ಸಿಲ್ಕ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಶಿರ್ಲಾಲು ಸಮೀಪದ ಕರಂಬಾರು ನಿವಾಸಿ ಉಮೇಶ್ ದೇವಾಡಿಗ (30) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ |









