ಕುರಿಯಾಳಕೊಪ್ಪ: ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಡಿ.28   ನೂಜಿಬಾಳ್ತಿಲ ಗ್ರಾಮದ ಕುರಿಯಾಳಕೊಪ್ಪ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ 4ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ಮಂಗಳವಾರ ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿ ಹಾಗೂ ಕ್ಷೇತ್ರದ ಅರ್ಚಕ ಕೆ. ವೆಂಕಟ್ರಮಣ ಅಮ್ಮಣ್ಣಾಯ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಾನಗಳೊಂದಿಗೆ ನಡೆಯಿತು.


ಗೊನೆ ಮುಹೂರ್ತ, ಭಕ್ತಾದಿಗಳಿಂದ ಹಸುರುವಾಣಿ ಸಮರ್ಪಣೆ, ದುರ್ಗಾಪೂಜೆ, ರಂಗಪೂಜೆ ನಡೆದು ಸೋಮವಾರ ಉಗ್ರಾಣ ಮುಹೂರ್ತ ನಡೆದು ಮಂಗಳವಾರ ಪೂರ್ವಾಹ್ನ ದೇವತಾ ಪ್ರಾರ್ಥನೆ, ಆಚಾರ್ಯವಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ ಬಳಿಕ ಮೂರಾಜೆ ಶ್ರೀ ಅಯ್ಯಪ್ಪ ಭಜನಾ ಮಂಡಳಿ ಹಾಗೂ ಕಲ್ಲುಗುಡ್ಡೆ ಅಪ್ಪೆಜಕ್ಕೆಲ್ ಸಹೋದರರಿಂದ ಭಜನಾ ಕಾರ್ಯಕ್ರಮ ನಡೆಯಿತು. ಅಪರಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ಕುರಿಯಾಳಕೊಪ್ಪ ಶ್ರೀ ಲಕ್ಷ್ಮೀ ಜನಾರ್ಧನ ಭಜನಾ ಮಂಡಳಿ, ಇಚ್ಲಂಪಾಡಿ ಶಂಖದೀಪ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು, ಶ್ರೀ ಭೂತಬಲಿ ಮಹೋತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ ಬಳಿಕ ಸಿಡಿಮದ್ದು ಪ್ರದರ್ಶನ ನಡೆಯಿತು.

Also Read  ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ

error: Content is protected !!
Scroll to Top