ಬಿ.ಐ.ಇ.ಆರ್.ಟಿ. ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.28   2019-20ನೇ ಸಾಲಿಗೆ ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ/ವಿಶೇಷ ಬಿ.ಇಡಿ ವಿದ್ಯಾರ್ಹತೆ ಪ್ರಮಾಣ ಪತ್ರ ಹೊಂದಿರುವ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಿದ್ದು, ಸೂಕ್ತ ದಾಖಲೆಯೊಂದಿಗೆ ಸಮಗ್ರ ಶಿಕ್ಷಣ ಕರ್ನಾಟಕ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ, ಮಂಗಳೂರು, ಜಿಲ್ಲಾ ಕಚೇರಿಗೆ ಜನವರಿ 2 ರೊಳಗೆ  ಅರ್ಜಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2452100 ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಧಿಕಾರಿ ಸಮಗ್ರ ಶಿಕ್ಷಣ ಕರ್ನಾಟಕ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  Home Windows 7 all in one Activated ISO Obtain Tutorial

Nk Kukke

error: Content is protected !!
Scroll to Top