ಜ.3 ರಿಂದ ರಾಜ್ಯ ಮಟ್ಟದ ಯುವಜನೋತ್ಸವ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.28   2019-20 ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 3 ರಿಂದ 5 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿದೆ.

ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಅಭ್ಯರ್ಥಿಗಳು ಈ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲು ಅರ್ಹರಾಗುತ್ತಾರೆ. ಸ್ಪರ್ಧಿಗಳು ಜನವರಿ 3 ರಂದು ಬೆಳಿಗ್ಗೆ 10 ಗಂಟೆಯ ಒಳಗೆ ನಿಗದಿತ ನಮೂನೆಯ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಬೇಕು ಎಂದು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಖ್ಯಾತ ವಾಗ್ಮಿ ವಲಿಯುದ್ದೀನ್ ಫೈಝಿ, ನವಂಬರ್ 18-19 ರಂದು ಪಾಜಪಳ್ಳಕ್ಕೆ

error: Content is protected !!
Scroll to Top