ಮಂಗಳೂರು: ಬಸ್ ಢಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಮಂಗಳೂರು, ಡಿ.28: ಚಾಲಕ ನಿಯಂತ್ರಣ ತಪ್ಪಿದ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾ.ಹೆ.ಯಲ್ಲಿ ಕೆತ್ತಿಕಲ್‌ನಲ್ಲಿ ಇಂದು ನಡೆದಿದೆ.


ಮೃತಪಟ್ಟ ಚಾಲಕನ ಮಾಹಿತಿ ತಿಳಿದು ಬಂದಿಲ್ಲ. ಶ್ರೀರಾಮ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಇದಾಗಿದ್ದು, ಮೂಡಬಿದಿರೆ ಕಡೆಯಿಂದ ಮಂಗಳೂರು ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದೆ. ಅತಿವೇಗದಿಂದ ಬರುತ್ತಿದ್ದ ಬಸ್ ಕೆತ್ತಿಕಲ್ ಬಳಿಯ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸ್ ಭೇಟಿ ನೀಡಿದ್ದಾರೆ.

Also Read  ಪರಿಸರದ ದಿನಾಚರಣೆ ಪ್ರಯುಕ್ತ ಎಸ್ಸೆಸ್ಸೆಫ್ ತೆಕ್ಕಾರು ಯುನಿಟ್ ವತಿಯಿಂದ ಉಚಿತ ಸಸಿ ವಿತರಣೆ

Nk Kukke

error: Content is protected !!
Scroll to Top