Big breaking news ಪೇಜಾವರ ಆರೋಗ್ಯ ಸ್ಥಿತಿ ತೀರಾ ಗಂಭೀರ: ಮೆದುಳು ನಿಷ್ಕ್ರಿಯ; ಕೆಎಂಸಿ ವೈದ್ಯರ ಹೇಳಿಕೆ

ಉಡುಪಿ, ಡಿ.28: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮೆದುಳು ನಿಷ್ಕ್ರಿಯವಾಗಿದ್ದು, ಪರಿಸ್ಥಿತಿ ತೀರಾ ಗಂಭೀರವಾಗಿದೆ’ ಎಂದು ಮಣಿಪಾಲದ ವೈದ್ಯರು ತಿಳಿಸಿದ್ದಾರೆ.

ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸ್ವಾಮೀಜಿಯ ಆರೋಗ್ಯ ಸ್ಥಿತಿ ಸುಧಾರಿಸುವ ಲಕ್ಷಣಗಳು ತೋರುತ್ತಿಲ್ಲ. ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಮತ್ತಷ್ಟು ಕ್ಷೀಣಿಸಿದೆ. ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ನಡೆಸಿದ ಪರೀಕ್ಷೆಗಳ ಪ್ರಕಾರ ಮೆದುಳು ನಿಷ್ಕ್ರಿಯವಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ. ಜನರಲ್ ಮೆಡಿಸನ್ ವಿಭಾಗದ ಮುಖ್ಯಸ್ಥ ಡಾ.ರವಿರಾಜ ವಿ.ಆಚಾರ್ಯ, ಡಾ.ಮಂಜುನಾಥ್ ಹಂದೆ, ಕಾರ್ಡಿಯಾಲಜಿಸ್ಟ್ ಡಾ.ಪದ್ಮಕುಮಾರ್, ಕ್ರಿಟಿಕಲ್ ಕೇರ್ ಮೆಡಿಸನ್ ವಿಭಾಗದ ಡಾ.ಶ್ವೇತಪ್ರಿಯ ಹಾಗೂ ಡಾ.ವಿಶಾಲ್ ಶಾನುಭಾಗ್ ಅವರನ್ನೊಳಗೊಂಡ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

Also Read  ಸುಳ್ಯ: ಮಸಾಲೆ ಪುಡಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯ ಕೈಗೆ ಗಂಭೀರ ಗಾಯ..!

error: Content is protected !!
Scroll to Top