ಭೀಕರ ರಸ್ತೆ ಅಪಘಾತ ► ಇಬ್ಬರ ದುರ್ಮರಣ



(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಕ್ವಾಲಿಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಮಖಾಮುಖಿ ಢಿಕ್ಕಿಯಾಗಿ ಕ್ವಾಲಿಸ್‍ ನಲ್ಲಿದ್ದ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಬಳಿ ಬುಧವಾರ ಮುಂಜಾನೆ ನಡೆದಿದೆ.





ಅಪಘಾತದಲ್ಲಿ ಮೃತಪಟ್ಟವರ ಹೆಸರು ಪತ್ತೆಯಾಗಿಲ್ಲ. ಉಳಿದಂತೆ ನಾಗರಾಜು, ಆನಂದ, ಪ್ರಭುಲಿಂಗದೇವರು ಎಂಬವರು ಗಾಯಗೊಂಡಿದ್ದಾರೆ. ಕ್ವಾಲಿಸ್‍ನಲ್ಲಿ ಪ್ರಯಾಣ ಮಾಡುತ್ತಿದ್ದವರನ್ನು ಕೋಲಾರ ಜಿಲ್ಲೆ ಬಂಗಾರಪೇಟೆ ಮೂಲದ ಜ್ಯೋತಿಷಿಗಳು ಎಂದು ಹೇಳಲಾಗ್ತಿದೆ.






ಬುಧವಾರ ಬೆಳಗ್ಗೆ ಕೊಳ್ಳೆಗಾಲದಿಂದ ಬೆಂಗಳೂರಿನ ಕಡೆ ತೆರಳುತ್ತಿದ್ದ ಕ್ವಾಲಿಸ್‍ ಹಾಗೂ ಬೆಂಗಳೂರು ಕಡೆಯಿಂದ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

 

error: Content is protected !!
Scroll to Top