Big Breaking News ಪೇಜಾವರ ಆರೋಗ್ಯ ವಿಚಾರಿಸಲು ಸಿಎಂ ಯಡಿಯೂರಪ್ಪ ದೌಡು: ಕ್ಷಣ ಕ್ಷಣವೂ ಆತಂಕ

ಉಡುಪಿ, ಡಿ.28: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರಗೆ ದೌಡಯಿಸಿದ್ದಾರೆ.

ಸ್ವಾಮೀಜಿ ಆರೋಗ್ಯ ಸ್ಥಿತಿಗತಿಯ ಮಾಹಿತಿ ನೀಡುವ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಕೆಎಂಸಿ ವೈದ್ಯರ ತಂಡ, ಸ್ವಾಮೀಜಿಯ ಆರೋಗ್ಯ ಸ್ಥಿತಿ ಸುಧಾರಿಸುವ ಲಕ್ಷಣಗಳು ತೋರುತ್ತಿಲ್ಲ. ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಮತ್ತಷ್ಟು ಕ್ಷೀಣಿಸಿದೆ. ಇನ್ನೂ ಪ್ರಜ್ಞಾಹೀನ ಇದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ನಡೆಸಿದ ಪರೀಕ್ಷೆಗಳ ಪ್ರಕಾರ ಮೆದುಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದೆ.

Also Read  ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು !

 

error: Content is protected !!
Scroll to Top