(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಜೀಪು ಹಾಗೂ ಕಂಟೇನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ನೆಲ್ಯಾಡಿ – ಉಪ್ಪಿನಂಗಡಿ ನಡುವೆ ಬಾಡಿಗೆ ನಡೆಸುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕ ಎಂದು ಹೇಳಲಾಗಿದ್ದು,ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.