ಉಪ್ಪಿನಂಗಡಿ: ಜೀಪ್ – ಕಂಟೇನರ್ ನಡುವೆ ಢಿಕ್ಕಿ ➤ ಜೀಪ್ ಚಾಲಕ ಮೃತ್ಯು, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಜೀಪು ಹಾಗೂ ಕಂಟೇನರ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಜೀಪು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಚಾಲಕನನ್ನು ನೆಲ್ಯಾಡಿ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಚಾಲಕ ಮೃತಪಟ್ಟರು. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top