ಕೌಟುಂಬಿಕ ಕಲಹ ಹಿನ್ನಲೆ ► ಇಬ್ಬರು ಕಂದಮ್ಮಗಳಿಗೆ ನೇಣು ಹಾಕಿದ ತಂದೆ ಆತ್ಮಹತ್ಯೆಗೆ ಶರಣು..!!!

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಪ್ರಪಂಚದ ಪರಿಜ್ಞಾನವೇ ಇಲ್ಲದ ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಮೊದಲು ನೇಣು ಹಾಕಿದ ತಂದೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಾಗಮಂಗಲ ತಾಲೂಕಿನ ಹೆಂಚಿನಕೊಪ್ಪಲು ಗ್ರಾಮದಲ್ಲಿ ಬುಧವಾರ ಬೆಳಿಕಿಗೆ ಬಂದಿದೆ.

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಜಯರಾಮ್(45) ಹಾಗೂ ತನ್ನ ಮಕ್ಕಳಾದ ಸೌಭಾಗ್ಯ(4), ಹರ್ಷಿಕ(2) ಅವರಿಗೆ ಮೊದಲು ನೇಣು ಹಾಕಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಯರಾಮ್ ರವರ ಮೊದಲ ಪತ್ನಿ ಬೆಂಗಳೂರಿನಲ್ಲಿ ವಾಸವಿದ್ದು, ಎರಡನೇ ಪತ್ನಿಯೊಂದಿಗೆ ವಾಸವಿದ್ದರು. ಆದ್ರೆ ಇತ್ತೀಚಿಗೆ ಇಬ್ಬರ ನಡುವೆ ಜಗಳವಾಗಿದ್ದು, ಪತ್ನಿ ತನ್ನ ತವರು ಸೇರಿಕೊಂಡಿದ್ದರು ಎನ್ನಲಾಗಿದೆ.

Also Read  ಗೂನಡ್ಕ: ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಭೆ

ಮಂಗಳವಾರ ತನ್ನ ಎರಡನೇ ಪತ್ನಿ ಮಕ್ಕಳನ್ನು ಕರೆದುಕೊಂಡು ಬಂದಿದ್ದ ಜಯರಾಮ್, ರಾತ್ರಿ ಈ ಕೃತ್ಯ ಎಸಗಿದ್ದಾರೆ. ಬುಧವಾರ ಬೆಳಗ್ಗೆ ಮೊದಲ ಪತ್ನಿಯ ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಠಾಣೆಯ ಸಿಪಿಐ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

error: Content is protected !!
Scroll to Top