ಉಪ್ಪಿನಂಗಡಿ: ರಸ್ತೆ ಬದಿ ಉರುಳಿ ಬಿದ್ದ ಲಾರಿ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.31. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಕರುವೇಲ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.





ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೃಹತ್ ಗಾತ್ರದ ಲಾರಿಯು ಕರುವೇಲ್ ಹಾಗೂ ನೆಕ್ಕಿಲಾಡಿ ಮಧ್ಯೆಯ ಕಾಂಕ್ರೀಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top