ಪ್ರಚೋದನಕಾರಿ ಸಂದೇಶ ರವಾನೆ ಆರೋಪ: ಯುವಕನ ಸೆರೆ

ಮಂಗಳೂರು, ಡಿ.31: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.

ಬಂಧಿತರನ್ನು ಪಾಂಡೇಶ್ವರ ನಿವಾಸಿ ಮೊಯ್ದೀನ್ ಹಮೀಝ್ (25) ಎಂದು ಗುರುತಿಸಲಾಗಿದೆ.

ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರ- ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಳ್ಳುವುದು, ರವಾನೆ ಮಾಡುವುದು ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಚೋದನಕಾರಿ ಪೋಸ್ಟ್ ಹಾಕಿದ ಹಲವರ ವಿರುದ್ಧ ನೋಟಿಸ್ ಕಳುಹಿಸಲಾಗಿದೆ. ಸದ್ಯ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

Also Read  ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ► ಸಾಧಕ ಮಹಿಳೆಯರಿಂದ ಅರ್ಜಿ ಆಹ್ವಾನ

ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top