ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    2019-20ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಕುಸ್ತಿ ಪಂದ್ಯಾವಳಿ ಜನವರಿ 28 ರಿಂದ 30 ರವರೆಗೆ  ಚಂಡೀಗರ್  ನಲ್ಲಿ ನಡೆಯಲಿದ್ದು, ಜನವರಿ 5 ರಂದು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕುಸ್ತಿ ಆಯ್ಕೆ ಪ್ರಕ್ರಿಯೆಗೆ ಜಿಲ್ಲೆಯಿಂದ ಆಯ್ಕೆ ಮಾಡುವಂತೆ ಸೂಚಿಸಲಾಗಿದೆ.

ಇದಕ್ಕೆ ಪೂರ್ವಭಾವಿಯಾಗಿ ಜನವರಿ 3 ರಂದು ಬೆಳಿಗ್ಗೆ  10 ಗಂಟೆಗೆ ಮಂಗಳೂರು ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಯು. ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕುಸ್ತಿ ತಂಡದ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.  ಈ ಆಯ್ಕೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರಾಜ್ಯ ಸರಕಾರಿ ಖಾಯಂ ನೌಕರರು ಭಾಗವಹಿಸಬಹುದಾಗಿದೆ. ಭಾಗವಹಿಸುವ ಕ್ರೀಡಾಪಟುಗಳು ಸರಕಾರಿ ಇಲಾಖೆಯಲ್ಲಿ ಖಾಯಂ ನೌಕರರಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ತಮ್ಮ ಇಲಾಖಾ ಮುಖ್ಯಸ್ಥರಿಂದ ದೃಢೀಕರಿಸಿದ ಗುರುತಿನ ಚೀಟಿಯನ್ನು ಪಡೆದುಕೊಂಡು ಜನವರಿ 3 ರಂದು ಬೆಳಿಗ್ಗೆ  10 ಗಂಟೆಗೆ ಯು. ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಹಾಜರಾಗಬೇಕು ಎಂದು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ. ಕ. ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು: ಮಾರ್ಚ್‌ ಮಧ್ಯದಿಂದ ಬೇಸಗೆ ಮಳೆ ಸಂಭವ

error: Content is protected !!
Scroll to Top