ರಾಷ್ಟ್ರೀಯ ಗ್ರಾಹಕ ದಿನಾಚರಣೆ ಸಪ್ತಾಹದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31   ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಂಗಳೂರು, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಮಂಗಳೂರು,  ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ), ದ.ಕ ಜಿಲ್ಲೆ. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಮಂಗಳೂರು, ದ.ಕ ಜಿಲ್ಲೆ.ಮತ್ತು ಬೆಸೆಂಟ್ ಮಹಿಳಾ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ  ಸಪ್ತಾಹದ ಸಮಾರೋಪ ಸಮಾರಂಭ ಜನವರಿ 2 ರಂದು ಬೆಳಿಗ್ಗೆ 10.30 ಗಂಟೆಗೆ ಬೆಸೆಂಟ್ ಮಹಿಳಾ ಕಾಲೇಜು ಸಭಾಂಗಣ ಮಂಗಳೂರು ಇಲ್ಲಿ ನಡೆಯಲಿದೆ.

Also Read  ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ


ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ, ಮಂಗಳೂರು ಆಯುಕ್ತ ಎ. ಲೋಕೇಶ್ ಕುಮಾರ್ ಮಾಡಲಿದ್ದಾರೆ. ಜಿಲ್ಲಾಧಿಕಾರಿ ದ.ಕ ಜಿಲ್ಲೆ ಮಂಗಳೂರು ಸಿಂಧು ಬಿ ರೂಪೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!
Scroll to Top