ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರು- 10, ಬೆರಳಚ್ಚುಗಾರರು –6, ಬೆರಳಚ್ಚು-ನಕಲುಗಾರರು –13 ಮತ್ತು ಆದೇಶಿಕ-ಜ್ಯಾರಿಕಾರರು -5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‍ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2020ನೇ ಜನವರಿ 13 ರಿಂದ ಫೆಬ್ರವರಿ 12 ರಂದು ರಾತ್ರಿ 11.59 ರವರೆಗೆ ಮಾತ್ರ ಸಲ್ಲಿಸಬಹುದು. ಆನ್‍ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಮೀಸಲಾತಿ ಹಾಗೂ ಹೆಚ್ಚಿನ ಮಾಹಿತಿಯನ್ನು ನ್ಯಾಯಾಲಯದ ವೆಬ್‍ಸೈಟ್ ನಿಂದ ಪಡೆಯಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಶಸ್ತ್ರ ನ್ಯಾಯಾಧೀಶರ ಕಚೇರಿ, ದ.ಕ ಜಿಲ್ಲೆ ಮಂಗಳೂರು ಇವರ  ಪ್ರಕಟಣೆ ತಿಳಿಸಿದೆ.

Also Read  ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ

error: Content is protected !!
Scroll to Top