ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..?

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಕೋಡಿಂಬಾಳ ರೈಲ್ವೇ ಹಳಿಯ ಬಳಿ ಯುವಕನೋರ್ವನ ಮೃತದೇಹವು ಪತ್ತೆಯಾಗಿದ್ದು, ಯುವಕನ ಸಾವಿನ ಬಗ್ಗೆ ಇದೀಗ ಅನುಮಾನ ಉಂಟಾಗಿದೆ.

ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ಕಡಬದ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ವಿನಿತ್ ಕೆಲಸ ಮಾಡಿಕೊಂಡಿದ್ದ ವೇಳೆ ಸೋಮವಾರದಂದು ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಈ ಬಗ್ಗೆ ವಿನಿತ್ ವಿರುದ್ದ ಪೋಲಿಸರಿಗೆ ದೂರು ನೀಡಲಾಗಿತ್ತು. ಅದರಂತೆ ಪೋಲಿಸರು ವಿನಿತ್ ನನ್ನು ಠಾಣೆಗೆ ಕರೆದೊಯ್ದಿದ್ದರು. ಬಳಿಕ ನಡೆದ ಬೆಳವಣಿಗೆಯಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Also Read  ಕಡಬ: ಪಾಲೋಳಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

error: Content is protected !!
Scroll to Top