(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ: ಬಾಯಿಯಲ್ಲಿ ನೀರೂರಿಸುವ ಮಶ್ರೂಮ್ ಮಸಾಲೆಯನ್ಮು ತಯಾರಿಸುವ ವಿಧವನ್ನು ಇಂದು ನಾವು ತಿಳಿಸಿಕೊಡುತ್ತೇವೆ.
ಮೊದಲು ಒಲೆಯ ಮೇಲೆ ಬಾಣಲೆ ಇಟ್ಟು ಕಾದ ನಂತರ ಲವಂಗ, ಚಕ್ಕೆ, ಏಲಕ್ಕಿ, ದನಿಯಾ, ಕಾಳು ಮೆಣಸು, ಜೀರಿಗೆ ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. ನಂತರ ಮಿಕ್ಸಿಯಲ್ಲಿ ಪುಡಿ ಮಾಡಿಕೊಳ್ಳಬೇಕು. ನಂತರ ಇದೇ ಬಾಣಲೆಗೆ ಎಣ್ಣೆ ಹಾಕಿ ಮಧ್ಯಮ ಗಾತ್ರದಲ್ಲಿ ಕತ್ತರಿಸಿಕೊಂಡ ಮಶ್ರೂಮ್ ಗಳನ್ನು ಹಾಕಿ ಕೆಂಪಗೆ ಹುರಿದು ತೆಗೆದಿಟ್ಟುಕೊಳ್ಳಬೇಕು. ಅದೇ ಎಣ್ಣೆಯಲ್ಲಿ ಈರುಳ್ಳಿ, ಹಸಿಮೆಣಸಿನ ಕಾಯಿ, ಶುಂಠಿ, ಬೆಳ್ಳುಳ್ಳಿ ಹಾಕಿ ಕೆಂಪಗೆ ಹುರಿದು ಮಿಕ್ಸಿಗೆ ಹಾಕಿ ಪೇಸ್ಟ್ ಮಾಡಿಕೊಳ್ಳಬೇಕು.
ಅದರ ನಂತರ ಬಾಣಲೆಗೆ ಎಣ್ಣೆ ಹಾಕಿ ರುಬ್ಬಿಕೊಂಡ ಈರುಳ್ಳಿ ಮಿಶ್ರಣ, ಟೊಮೆಟೋ ರಸವನ್ನು ಹಾಕಿ 5 ನಿಮಿಷ ಕುದಿಯಲು ಬಿಡಬೇಕು. ನಂತರ ಅಚ್ಚಖಾರದ ಪುಡಿ, ಅರಿಶಿನ, ಉಪ್ಪು, ಬೆಲ್ಲ, ಈ ಹಿಂದೆ ಮಾಡಿಕೊಂಡ ಮಸಾಲೆ ಪುಡಿ, ಬಾದಾಮಿ ಪೇಸ್ಟ್, ಫ್ರೆಶ್ ಕ್ರೀಮ್, ಮಶ್ರೂಮ್ ಗಳನ್ನು ಹಾಕಿ 5 ನಿಮಿಷ ಕುದಿಸಿದರೆ ರುಚಿಕರವಾದ ಮಶ್ರೂಮ್ ಮಸಾಲೆ ರೆಡಿ.